Karnataka Rains: ಮುಂದಿನ ನಾಲ್ಕು ದಿನ ಕರ್ನಾಟಕದಲ್ಲಿ ಭಾರೀ ಮಳೆ; ಅನೇಕ ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ ಜಾರಿ

Karnataka Rains: ಮುಂದಿನ ನಾಲ್ಕು ದಿನ ಕರ್ನಾಟಕದಲ್ಲಿ ಭಾರೀ ಮಳೆ; ಅನೇಕ ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ ಜಾರಿ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 4 ದಿನಗಳ ಕಾಲ (ಅಗಸ್ಟ್ 25 ರಿಂದ 28ರ ವರೆಗೆ) ಭಾರಿ ಮಳೆಯಾಗುವ ಸಾಧ್ಯತೆ ಇದೆ, ಎಂದು ಭಾರತೀಯ ಹವಮಾನ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ. ಕರಾವಳಿಯ ಜಿಲ್ಲೆಗಳನ್ನು ಹೊರತುಪಡಿಸಿ, ಆಗಸ್ಟ್ 24ರಂದು ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಪ್ರಕಟಿಸಲಾಗಿದೆ, ಈ ಅವಧಿಯಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆ ಹೆಚ್ಚಿದೆ.

WhatsApp Group Join Now
Telegram Group Join Now

ರಾಜಧಾನಿ ಹಾಗೂ ರಾಜ್ಯದ ಹವಾಮಾನ;

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಹ ಮೋಡ ಆವರಿಸಿದ ವಾತಾವರಣವಿರಲಿದೆ. ಹಗುರವಾಗಿ ಅಥವಾ ಗುಡುಗು ಮಿಂಚಿನೊಂದಿಗೆ ಮಳೆ ಸುರಿಯುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ.

ಜಿಲ್ಲಾ ಅವರು ಮಳೆ ಎಚ್ಚರಿಕೆ;

ಆಗಸ್ಟ್ 25:

  • ಕರಾವಳಿ ಭಾಗಗಳಲ್ಲಿ ಮಧ್ಯಮ ಪ್ರಮಾಣದ ಮಳೆ ಸುರಿಯಲಿದೆ
  • ಉತ್ತರ ಕರ್ನಾಟಕ ಭಾಗವಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ.
  • ದಕ್ಷಿಣ ಕರ್ನಾಟಕದ ಭಾಗಗಳಾದ ಬಳ್ಳಾರಿ, ಬೆಂಗಳೂರು (ಗ್ರಾಮೀಣ/ನಗರ), ಚಿಕ್ಕಮಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಹಾಸನ, ಮಂಡ್ಯ, ಮೈಸೂರು, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡ್ ಮಿಂಚಿನ ಮಳೆ ಅಥವಾ ಹಗುರ ಮಳೆ ಬೀಳಬಹುದು.

ಆಗಸ್ಟ್ 26;

  • ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ,
  • ಉತ್ತರ ಕರ್ನಾಟಕದ ಪ್ರದೇಶಗಳಾದ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ/ಗುಡುಗು ಮಳೆಯಾಗಲಿದೆ,
  • ದಕ್ಷಿಣ ಕರ್ನಾಟಕ ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು (ಗ್ರಾಮೀಣ/ನಗರ), ರಾಮನಗರ ಜಿಲ್ಲೆಗಳಲ್ಲಿ ಹಗುರ ಪ್ರಮಾಣದ ಮಳೆ ಆಗಲಿದೆ.

ಆಗಸ್ಟ್ 27;

  • ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರಲಿದೆ,
  • ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಹಗುರ ಪ್ರಮಾಣದ ಮಳೆಯಾಗಲಿದೆ,
  • ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಹಗುರ ಪ್ರಮಾಣದ ಮಳೆಯಾಗಲಿದೆ

ಆಗಸ್ಟ್ 28 & 29;

  • ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆಯ ಮುನ್ಸೂಚನೆ,
  • ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ ಮಳೆಯಾಗಲಿದೆ,
  • ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಗುಡುಗು ಮಿಂಚಿನೊಂದಿಗೆ ಹಗುರ ಪ್ರಮಾಣದ ಮಳೆಯಾಗಲಿದೆ.

ಮೀನುಗಾರರಿಗೆ ಎಚ್ಚರಿಕೆ;

ಆಗಸ್ಟ್ 26ರಿಂದ 27 ರವರೆಗೆ ಕರ್ನಾಟಕದ ಕರಾವಳಿ ತೀರಗಳಲ್ಲಿ ಗಾಳಿಯ ವೇಗವು 60 ಕಿಲೋ ಮೀಟರ್ವರೆಗೆ ಹೆಚ್ಚು ಸಾಧ್ಯತೆ ಇದೆ, ಚಂಡಮಾರುತದಂತಹ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅವಮಾನ ಇಲಾಖೆಯು ಕಡ್ಡಾಯ ಎಚ್ಚರಿಕೆಯನ್ನು ನೀಡಿದೆ.

WhatsApp Group Join Now
Telegram Group Join Now

Leave a Comment